ರಾಯಚೂರು: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ತಂದೆ-ಮಗಳು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸಮೀಪ ನಡೆದಿದೆ.
ಪ್ರಸಾದ್(50), ವಿದ್ಯಾ(11) ಮೃತಪಟ್ಟವರು ಎಂದು ಹೇಳಲಾಗಿದೆ. ಅಂಬಾರಮಠದ ಅರ್ಚಕರಾಗಿದ್ದ ಪ್ರಸಾದ್ ಮಂತ್ರಾಲಯಕ್ಕೆ ಕಾರ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಬಳಗಾನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.