ರಾಯಚೂರು ಸಮೀಪದ ಮಂಜರ್ಲಾ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಅಭಿಷೇಕ್, ಬಸವರಾಜ್, ಗಣೇಶ್ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ರಾಯಚೂರಿನ ನವೋದಯ ಕಾಲೇಜಿನಲ್ಲಿ ಓದುತ್ತಿದ್ದರು. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.