
ರಾಯಚೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿದ ಹಿನ್ನೆಲೆಯಲ್ಲಿ ಆರ್.ಎಸ್.ಎಸ್. ಕಾರ್ಯಕರ್ತ ರಾಜು ಎಂಬುವನನ್ನು ಬಂಧಿಸಲಾಗಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಮುಸ್ಲಿಂ ಧರ್ಮಕ್ಕೆ ತರುವ ರೀತಿಯಲ್ಲಿ ಸ್ಟೇಟಸ್ ಹಾಕಿದ ಆರೋಪ ಹಿನ್ನೆಲೆಯಲ್ಲಿ ತಡರಾತ್ರಿ ಲಿಂಗಸಗೂರು ಠಾಣೆಯ ಮುಂದೆ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.
ಮುಸ್ಲಿಂ ಸಮುದಾಯದ ನೂರಾರು ಜನ ಸೇರಿ ಪ್ರತಿಭಟನೆ ನಡೆಸಿದ್ದು, ಅವಹೇಳನಕಾರಿ ಸ್ಟೇಟಸ್ ಹಾಕಿದ ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸರು ಆರೋಪಿ ರಾಜುನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.