ರಾಯಚೂರು: ವ್ಯಕ್ತಿಯೊಬ್ಬರ ಗಮನ ಬೇರೆಡೆ ಸೆಳೆದು 7 ಲಕ್ಷ ರೂಪಾಯಿ ದೋಚಿದ ಘಟನೆ ಮಾನ್ವಿ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆ ಬಳಿ ನಡೆದಿದೆ.
ರಾಯಚೂರು ಜಿಲ್ಲೆಯ ಮಾನ್ವಿಯ ಬ್ಯಾಂಕ್ ಆಫ್ ಬರೋಡಾ ಶಾಖೆ ಸಮೀಪ ಖಾಜಾ ಹುಸೇನ್ ಎಂಬುವವರ 7 ಲಕ್ಷ ರೂಪಾಯಿ ನಗದು ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬ್ಯಾಂಕ್ ನಲ್ಲಿ ಹಣ ಬಿಡಿಸಿಕೊಳ್ಳುವುದನ್ನು ಕಿಡಿಗೇಡಿಗಳು ಗಮನಿಸಿದ್ದರು. ಬ್ಯಾಂಕ್ ಹೊರಗೆ ಹುಸೇನ್ ಗಮನ ಬೇರೆಡೆ ಸೆಳೆದು ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ. ಸ್ಥಳೀಯ ಯುವಕರು ಆರೋಪಿಗಳನ್ನು ಚೇಸ್ ಮಾಡಿ ಹಿಡಿಯಲು ಪ್ರಯತ್ನ ನಡೆಸಿದ್ದಾರೆ. ಕಿಡಿಗೇಡಿಗಳ ಬಳಿ ಇದ್ದ ಮಾರಕಾಸ್ತ್ರಗಳನ್ನು ನೋಡಿ ಯುವಕರು ಸುಮ್ಮನಾಗಿದ್ದಾರೆ. ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.