ಬೆಂಗಳೂರು: ಈಗಾಗಲೇ ಪೆಟ್ರೋಲ್, ಡೀಸೆಲ್, ಹಾಲು ಸೇರಿ ಅನೇಕ ಅಗತ್ಯ ವಸ್ತುಗಳ ದರ ಏರಿಕೆಯಾಗಿದೆ. ಈಗ ಮದ್ಯದ ದರ ಕೂಡ ಏರಿಕೆಯಾಗಲಿದೆ. ಈ ಮೂಲಕ ಮದ್ಯ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ.
ಮದ್ಯದ ದರ ಅಲ್ಪ ಪ್ರಮಾಣದಲ್ಲಿ ಏರಿಕೆ ಮಾಡಲು ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ ಸಲ್ಲಿಸಲ ಅಬಕಾರಿ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವ ವರ್ಗದ ಮದ್ಯದ ದರವನ್ನು ಎಷ್ಟು ಪ್ರಮಾಣದಲ್ಲಿ ಪರಿಷ್ಕರಿಸಬೇಕು ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದು, ಮದ್ಯದ ದರ ಏರಿಕೆ ಸಂಬಂಧಪಟ್ಟಂತೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಅಬಕಾರಿ ಇಲಾಖೆಗೆ 38,000 ಕೋಟಿ ರೂ. ಆದಾಯ ಸಂಗ್ರಹ ಗುರಿ ನಿಗದಿಪಡಿಸಲಾಗಿದೆ. ನೆರೆ ರಾಜ್ಯಗಳ ಮದ್ಯದ ದರಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.