ಮಹತ್ವದ ಬೆಳವಣಿಗೆಯೊಂದರಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಯುಪಿಐ ಪೇಮೆಂಟ್ ಗೆ ಕ್ರೆಡಿಟ್ ಕಾರ್ಡ್ ಲಿಂಕ್ ಮಾಡಲು ಚಿಂತನೆ ನಡೆಸಿದೆ. ಈಗಾಗಲೇ ಈ ಕುರಿತ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಬೆಳವಣಿಗೆಯಿಂದ ಕ್ರೆಡಿಟ್ ಬಳಕೆದಾರರೂ ಸಹ ತಮ್ಮ ಪಾವತಿಗಾಗಿ ಯುಪಿಐ ಪೇಮೆಂಟ್ ವ್ಯವಸ್ಥೆಯನ್ನು ಬಳಸಿಕೊಳ್ಳಬಹುದಾಗಿದೆ. ಇದರಿಂದ ಆನ್ಲೈನ್ ವಹಿವಾಟು ಸಹ ಹೆಚ್ಚಾಗುವ ನಿರೀಕ್ಷೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಂದಿದೆ.
ಈವರೆಗೆ ಡೆಬಿಟ್ ಕಾರ್ಡ್ ಬಳಕೆದಾರರು ಮಾತ್ರ ಯುಪಿಎ ಪೇಮೆಂಟ್ ವ್ಯವಸ್ಥೆಯನ್ನು ಬಳಸಿಕೊಳ್ಳಬಹುದಾಗಿತ್ತು. ಇದೀಗ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೂ ಈ ಸೌಲಭ್ಯ ಲಭ್ಯವಾಗಲಿದೆ. ಈ ಕುರಿತು ಕ್ರಮಗಳನ್ನು ಕೈಗೊಳ್ಳುವಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಈಗಾಗಲೇ ನ್ಯಾಷನಲ್ ಪೇಮೆಂಟ್ ಕಾರ್ಪೋರೇಶನ್ ಅಫ್ ಇಂಡಿಯಾ ಗೆ ಸೂಚನೆಯನ್ನು ರವಾನಿಸಿದೆ ಎನ್ನಲಾಗಿದೆ.
ಮೊದಲ ಹಂತದಲ್ಲಿ ರುಪೇ ಕಾರ್ಡ್ ಹೊಂದಿರುವ ಬಳಕೆದಾರರಿಗೆ ಮಾತ್ರ ಇದು ಲಭ್ಯವಾಗಲಿದೆ ಎಂದು ತಿಳಿದುಬಂದಿದೆ.