alex Certify Big News: ಯುಪಿಐ ಪೇಮೆಂಟ್ ಗೆ ಕ್ರೆಡಿಟ್ ಕಾರ್ಡ್ ಲಿಂಕ್ ಮಾಡಲು ಆರ್.ಬಿ.ಐ. ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಯುಪಿಐ ಪೇಮೆಂಟ್ ಗೆ ಕ್ರೆಡಿಟ್ ಕಾರ್ಡ್ ಲಿಂಕ್ ಮಾಡಲು ಆರ್.ಬಿ.ಐ. ಚಿಂತನೆ

ಮಹತ್ವದ ಬೆಳವಣಿಗೆಯೊಂದರಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಯುಪಿಐ ಪೇಮೆಂಟ್ ಗೆ ಕ್ರೆಡಿಟ್ ಕಾರ್ಡ್ ಲಿಂಕ್ ಮಾಡಲು ಚಿಂತನೆ ನಡೆಸಿದೆ. ಈಗಾಗಲೇ ಈ ಕುರಿತ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯಿಂದ ಕ್ರೆಡಿಟ್ ಬಳಕೆದಾರರೂ ಸಹ ತಮ್ಮ ಪಾವತಿಗಾಗಿ ಯುಪಿಐ ಪೇಮೆಂಟ್ ವ್ಯವಸ್ಥೆಯನ್ನು ಬಳಸಿಕೊಳ್ಳಬಹುದಾಗಿದೆ. ಇದರಿಂದ ಆನ್ಲೈನ್ ವಹಿವಾಟು ಸಹ ಹೆಚ್ಚಾಗುವ ನಿರೀಕ್ಷೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಂದಿದೆ.

ಈವರೆಗೆ ಡೆಬಿಟ್ ಕಾರ್ಡ್ ಬಳಕೆದಾರರು ಮಾತ್ರ ಯುಪಿಎ ಪೇಮೆಂಟ್ ವ್ಯವಸ್ಥೆಯನ್ನು ಬಳಸಿಕೊಳ್ಳಬಹುದಾಗಿತ್ತು. ಇದೀಗ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೂ ಈ ಸೌಲಭ್ಯ ಲಭ್ಯವಾಗಲಿದೆ. ಈ ಕುರಿತು ಕ್ರಮಗಳನ್ನು ಕೈಗೊಳ್ಳುವಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಈಗಾಗಲೇ ನ್ಯಾಷನಲ್ ಪೇಮೆಂಟ್ ಕಾರ್ಪೋರೇಶನ್ ಅಫ್ ಇಂಡಿಯಾ ಗೆ ಸೂಚನೆಯನ್ನು ರವಾನಿಸಿದೆ ಎನ್ನಲಾಗಿದೆ.

ಮೊದಲ ಹಂತದಲ್ಲಿ ರುಪೇ ಕಾರ್ಡ್ ಹೊಂದಿರುವ ಬಳಕೆದಾರರಿಗೆ ಮಾತ್ರ ಇದು ಲಭ್ಯವಾಗಲಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...