ನವದೆಹಲಿ: ಆರ್ ಬಿಐ – ಭಾರತೀಯ ರಿಸರ್ವ್ ಬ್ಯಾಂಕ್ ನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಶಕ್ತಿಕಾಂತ್ ದಾಸ್ ಅವರ ನಿವೃತ್ತಿ ಬಳಿಕ ಇದೀಗ ಸಂಜಯ್ ಮಲ್ಹೋತ್ರಾ ಅವರನ್ನು ಆರ್ ಬಿಐ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಸಂಜಯ್ ಮಲ್ಹೋತ್ರಾ, ಪ್ರಸ್ತುತ ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಶಕ್ತಿಕಾಂತ್ ದಾಸ್ ಅವರ ಉತ್ತರಾಧಿಕಾರಿಯಾಗಿದ್ದಾರೆ.
ಕೇಂದ್ರ ಸರ್ಕಾರ ಹಣಕಾಸು ಸಚಿವಾಲಯದ ಕಾರ್ಯದರ್ಶಿ (ಕಂದಾಯ) ಸಂಜಯ್ ಮಲ್ಹೋತ್ರಾ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್‌ನ ನೂತನ ಗವರ್ನರ್ ಆಗಿ ಅಧಿಕೃತವಾಗಿ ನೇಮಕ ಮಾಡಿದೆ.