ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ನಂದಿಸಲು ಹಲವಾರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ. ಮಹಾ ಕುಂಭ ನಗರ ಪ್ರದೇಶದ ಸೆಕ್ಟರ್ 18 ರಲ್ಲಿ ಈ ಬೆಂಕಿ ಘಟನೆ ನಡೆದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಓಲ್ಡ್ ಜಿಟಿ ರಸ್ತೆಯ ತುಳಸಿ ಚೌರಾಹಾ ಬಳಿಯ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದವರು ಬೆಂಕಿಯನ್ನು ಹೆಚ್ಚಾಗಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಖಾಕ್ ಚೌಕ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯೋಗೇಶ್ ಚತುರ್ವೇದಿ ತಿಳಿಸಿದ್ದಾರೆ.