ಬೆಳಗಾವಿ: ಪತ್ನಿ ಹಾಗೂ ಮಕ್ಕಳ ಕಣ್ಣೆದುರೇ ದುಷ್ಕರ್ಮಿಗಳು ರಿಯಲ್ ಎಸ್ಟೇಟ್ ಏಜೆಂಟ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಕ್ಯಾಂಪ್ ಪ್ರದೇಶದ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ರಿಯಲ್ ಎಸ್ಟೇಟ್ ಏಜೆಂಟ್ ಸುಧೀರ್ ಕಾಂಬಳೆ (57) ಕೊಲೆಯಾದ ದುರ್ದೈವಿ.
ಹಲವು ವರ್ಷಗಳಿಂದ ದುಬೈನಲ್ಲಿ ವಾಸವಾಗಿದ್ದ ಸುಧೀರ್ ಕಾಂಬಳೆ ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳ ಹಿಂದೆ ಬೆಳಗಾವಿಗೆ ಬಂದು ಕ್ಯಾಂಪ್ ಪ್ರದೇಶದ ಮನೆಯಲ್ಲಿ ಕುಟುಂಬ ಸಮೇತ ವಾಸವಾಗಿದ್ದರು.
ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳ ತಂಡ ಸುಧೀರ್ ಅವರ ಹೊಟ್ಟೆ, ಕತ್ತು, ಕೈ, ಮುಖವನ್ನು ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಕ್ಯಾಂಪ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.