ನವದೆಹಲಿ: ರಿಯಲ್ ಎಸ್ಟೇಟ್ ವಂಚನೆ ಪ್ರಕರಣದಲ್ಲಿ ಭಾರತ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ವಿರುದ್ಧ ಹೊಸ ತನಿಖೆಗೆ ಆದೇಶ ನೀಡಲಾಗಿದೆ.
ಫ್ಲಾಟ್ ಖರೀದಿದಾರರಿಗೆ ವಂಚನೆ ಮಾಡಿದ ಪ್ರಕರಣದಲ್ಲಿ ಮಾಜಿ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಪ್ರಸ್ತುತ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಇತರರ ಬಗ್ಗೆ ದೆಹಲಿ ನ್ಯಾಯಾಲಯವು ಹೊಸ ತನಿಖೆಗೆ ನಿರ್ದೇಶಿಸಿದೆ.
ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಮ್ಯಾಜಿಸ್ಟ್ರೀಯಲ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದರು. ಇದು ಗಂಭೀರ್ ವಿರುದ್ಧದ ಆರೋಪಗಳನ್ನು ನಿರ್ಧರಿಸುವಲ್ಲಿ “ಮನಸ್ಸಿನ ಅಸಮರ್ಪಕ ಅಭಿವ್ಯಕ್ತಿ” ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.
ಆರೋಪಗಳು ಗೌತಮ್ ಗಂಭೀರ್ ಪಾತ್ರದ ಬಗ್ಗೆ ಹೆಚ್ಚಿನ ತನಿಖೆಗೆ ಅರ್ಹವಾಗಿವೆ ಎಂದು ನ್ಯಾಯಾಧೀಶ ಗೋಗ್ನೆ ತಮ್ಮ ಅಕ್ಟೋಬರ್ 29 ರ ಆದೇಶದಲ್ಲಿ ಬರೆದಿದ್ದಾರೆ.
ರಿಯಲ್ ಎಸ್ಟೇಟ್ ಸಂಸ್ಥೆಗಳಾದ ರುದ್ರಾ ಬಿಲ್ಡ್‌ವೆಲ್ ರಿಯಾಲ್ಟಿ ಪ್ರೈವೇಟ್ ಲಿಮಿಟೆಡ್, ಎಚ್ ಆರ್ ಇನ್‌ಫ್ರಾಸಿಟಿ ಪ್ರೈವೇಟ್ ಲಿಮಿಟೆಡ್, ಯುಎಂ ಆರ್ಕಿಟೆಕ್ಚರ್ಸ್ ಮತ್ತು ಗುತ್ತಿಗೆದಾರರು, ಕಂಪನಿಗಳ ಜಂಟಿ ಉದ್ಯಮದ ನಿರ್ದೇಶಕ ಮತ್ತು ಬ್ರಾಂಡ್ ಅಂಬಾಸಿಡರ್ ಆಗಿದ್ದ ಗಂಭೀರ್ ವಿರುದ್ಧ ಆಪಾದಿತ ವಂಚನೆ ಪ್ರಕರಣವನ್ನು ದಾಖಲಿಸಲಾಗಿದೆ..
ಬ್ರಾಂಡ್ ಅಂಬಾಸಿಡರ್ ಆಗಿ “ಹೂಡಿಕೆದಾರರೊಂದಿಗೆ ನೇರ ಸಂಪರ್ಕ” ಹೊಂದಿರುವ ಏಕೈಕ ಆರೋಪಿ ಗಂಭೀರ್ ಎಂದು ನ್ಯಾಯಾಧೀಶರು ಗಮನಿಸಿದ್ದಾರೆ.