ನವದೆಹಲಿ: ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1200 ಕೋಟಿ ರೂಪಾಯಿ ಹೆಚ್ಚುವರಿಯಾಗಿ ನೀಡಲಾಗುವುದು.
ರಾಜ್ಯದಲ್ಲಿ ಮತ್ತಷ್ಟು ಕಾಮಗಾರಿ ಕೈಗೊಳ್ಳಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 1200 ಕೋಟಿ ರೂಪಾಯಿ ಅನುದಾನ ನೀಡಲು ಸಮ್ಮತಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಪ್ರಸಕ್ತ ಸಾಲಿನಲ್ಲಿ 2 ಕೋಟಿ ಹೆಚ್ಚುವರಿ ಮಾನವ ದಿನಗಳನ್ನು ಸೃಷ್ಟಿಸಲು ಅವಕಾಶ ನೀಡಿದ್ದರಿಂದ ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಹೆಚ್ಚುವರಿ ಉದ್ಯೋಗ ಸಿಗಲಿದೆ ಎಂದು ಹೇಳಿದ್ದಾರೆ.
123 ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಹಿನ್ನೆಲೆಯಲ್ಲಿ ನರೇಗಾ ಯೋಜನೆಯಡಿ ಪ್ರತಿ ಗ್ರಾಮೀಣ ಕುಟುಂಬಕ್ಕೆ 50 ಹೆಚ್ಚುವರಿ ಮಾನವ ದಿನಗಳ ಉದ್ಯೋಗ ಅವಕಾಶ ಕಲ್ಪಿಸಲು 400 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಒಪ್ಪಿದ್ದಾರೆ ಎಂದು ಹೇಳಲಾಗಿದೆ.