
ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. 2020 ರ ಜೂನ್ ನಿಂದ ಅಕ್ಟೋಬರ್ ತಿಂಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
5 ತಿಂಗಳ ಅವಧಿಗೆ 450 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಈ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.