ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು ದಾಖಲೆಯ ಉಷ್ಣಾಂಶ ದಾಖಲಾಗಿದೆ. ಇಂದು ರಾಜಧಾನಿಯಲ್ಲಿ 38.5°c ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಇತಿಹಾಸದಲ್ಲಿ ಅತಿ ಹೆಚ್ಚು ತಾಪಮಾನ ಇದಾಗಿದೆ. 15 ದಿನಗಳ ಹಿಂದೆ 37.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. 1996ರ ಮಾರ್ಚ್ 27 ರಂದು 37.3 ಡಿಗ್ರಿ ಸೆಲ್ಸಿಯಸ್, 2017 ರಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಇಂದು 38.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.