ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆ ವಿತರಣೆ ಕುರಿತಾಗಿ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಲಸಿಕೆ ಪಡೆಯುವವರು ‘ಕೋ ವಿನ್’ ವೆಬ್ ಸೈಟ್ ಅಥವಾ ಆಪ್ ನಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕಿದೆ. ಮಾರ್ಗಸೂಚಿ ಅನ್ವಯ ಕೊರೋನಾ ಲಸಿಕೆ ಪಡೆಯುವ ಸಾರ್ವಜನಿಕರಿಗೆ ಸರ್ಕಾರದಿಂದ ನೀಡಲಾಗುವ 12 ದಾಖಲೆಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ನೀಡುವಂತೆ ತಿಳಿಸಲಾಗಿದೆ. ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಡ್ರೈವಿಂಗ್ ಲೈಸೆನ್ಸ್, ಪಿಂಚಣಿ ದಾಖಲೆ ಸೇರಿದಂತೆ ಸರ್ಕಾರದಿಂದ ನೀಡಲಾದ 12 ದಾಖಲೆಗಳಲ್ಲಿ ಒಂದನ್ನು ನೀಡಿ ಮುಂಚಿತವಾಗಿ ನೋಂದಣಿ ಮಾಡಿಸಿಕೊಳ್ಳಬೇಕಿದೆ.
ಕೊರೋನಾ ವಾರಿಯರ್ಸ್ ಗೆ ಮೊದಲ ಆದ್ಯತೆಯಾಗಿ ಲಸಿಕೆ ನೀಡಲಿದ್ದು, ನಂತರ ಫ್ರಂಟ್ಲೈನ್ ವರ್ಕರ್ಸ್ ಗೆ ಲಸಿಕೆ ನೀಡಲಾಗುವುದು. ಬಳಿಕ ಬೇರೆ ರೋಗಗಳಿಂದ ಬಳಲುವವರು, 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ, ನಂತರದಲ್ಲಿ 50 ವರ್ಷಕ್ಕಿಂತ ಕೆಳಗಿನವರಿಗೆ ಆದ್ಯತೆ ಮೇಲೆ ಲಸಿಕೆ ನೀಡಲಾಗುತ್ತದೆ ಎನ್ನಲಾಗಿದೆ.