ಬೆಂಗಳೂರು: 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ವಿಧಾನ ಪರಿಷತ್ ನಲ್ಲಿ ಮಾಹಿತಿ ನೀಡಿದ್ದಾರೆ.
1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ವಿಚಾರ ಹೈಕೋರ್ಟ್ ಮತ್ತು ಕೆಎಟಿ ನ್ಯಾಯಾಲಯಗಳಲ್ಲಿ ದಾವೆ ಇದೆ. ತಡೆಯಾಜ್ಞೆ ತೆರವಾದ ನಂತರ ಮತ್ತು ಅಂತಿಮ ತೀರ್ಪು ಬಂದ ನಂತರ ನೇಮಕಾತಿ ಆದೇಶ ನೀಡಲಾಗುವುದು ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆ ನೀತಿ ಸಂಹಿತೆ ಗಮನದಲ್ಲಿಟ್ಟುಕೊಂಡು ಅಂತಿಮವಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಆದೇಶ ಹೊರಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.