ರಾಯಚೂರು: ರಾಜ್ಯದಾದ್ಯಂತ 1,500 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆ ಭರ್ತಿಗೆ ಮುಂದಿನ ತಿಂಗಳು ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಸಚಿವರು, ಇದೇ ವೇಳೆ 357 ಸರ್ವೆಯರ್ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುವುದು. ಮುಂದಿನ ತಿಂಗಳು ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆ ಪ್ರಕ್ರಿಯೆ ಆರಂಭವಾಗಲಿದೆ. ಕಂದಾಯ ಇಲಾಖೆ ಡಿಜಿಟಲೀಕರಣ ವ್ಯವಸ್ಥೆ ತ್ವರಿತಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಬೆಳೆ ಸಮೀಕ್ಷೆ ಆಧರಿಸಿ ರಾಜ್ಯದ ಎಲ್ಲಾ ಅರ್ಹ ರೈತರ ಖಾತೆಗಳಿಗೆ ಮೊದಲ ಕಂತಿನ ಬರ ಪರಿಹಾರ ಮೊತ್ತ ಜಮಾ ಮಾಡಲಾಗುವುದು. ರೈತರ ಖಾತೆಗೆ ನೇರವಾಗಿ ಬರ ಪರಿಹಾರ ಮೊತ್ತ ಪಾವತಿಸಲಾಗುತ್ತದೆ. ಹಿಂದಿನ ವ್ಯವಸ್ಥೆ ಸರಿಪಡಿಸಲು ಎರಡು ತಿಂಗಳಾಗಿದ್ದು, ಕೇಂದ್ರ ಸರ್ಕಾರದಿಂದ ಬರ ಪರಿಹಾರ ಮಂಜೂರು ವಿಳಂಬವಾಗಿದ್ದರೂ ರಾಜ್ಯ ಸರ್ಕಾರದಿಂದ ತಲಾ ಎರಡು ಸಾವಿರ ರೂಪಾಯಿ ನೀಡಲಾಗುವುದು ಎಂದು ಹೇಳಿದ್ದಾರೆ.