ವಿಲೇಜ್ ಅಕೌಂಟೆಂಟ್(ಗ್ರಾಮ ಲೆಕ್ಕಾಧಿಕಾರಿ) ಹುದ್ದೆಯನ್ನು ಸರ್ಕಾರ ಗ್ರಾಮ ಆಡಳಿತಾಧಿಕಾರಿ ಎಂದು ಮರು ನಾಮಕರಣ ಮಾಡಿದೆ. ಇನ್ನು ಮುಂದೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ರಾಜ್ಯಮಟ್ಟದಲ್ಲಿ ಸಾಮಾನ್ಯ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಮೆರಿಟ್ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು.
ಸುಮಾರು 9 ಸಾವಿರ ಗ್ರಾಮ ಆಡಳಿತಾಧಿಕಾರಿಗಳಿದ್ದು, ಇನ್ನೂ ಒಂದೂವರೆ ಸಾವಿರದಷ್ಟು ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳ ಭರ್ತಿ ಅಗತ್ಯವಿದೆ. ಮೊದಲ ಹಂತದಲ್ಲಿ 750 ಹುದ್ದೆಗಳ ಭರ್ತಿಗೆ ಕಂದಾಯ ಇಲಾಖೆ ಮುಂದಾಗಿದೆ. ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಕೆಪಿಎಸ್ಸಿ ಅಥವಾ ಕೆಇಎ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು. ನಂತರ ಜಿಲ್ಲಾವಾರು ನೇಮಕಾತಿ ನಡೆಯಲಿದೆ. ಪ್ರಸ್ತುತ ಜಿಲ್ಲಾಧಿಕಾರಿ ಹಂತದಲ್ಲಿ ಪಿಯುಸಿ ಅಂಕಗಳ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಈಗ ಪಿಯುಸಿ ಅಂಕದ ಆಧಾರದಲ್ಲಿ ನೇಮಕಾತಿ ಬದಲು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಹೇಳಲಾಗಿದೆ.