ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದ್ದು, ಶುಲ್ಕ ಪಾವತಿಗೆ ಡಿಸೆಂಬರ್ 6 ಕೊನೆಯ ದಿನವಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೊದಲು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಿ ನವೆಂಬರ್ 6 ಅರ್ಜಿ ಸಲ್ಲಿಕೆಗೆ ಕೊನೆಯ ದಿನವೆಂದು ನಿಗದಿಪಡಿಸಿತ್ತು. ಕೆ -ಸೆಟ್ ಫಲಿತಾಂಶ ನವೆಂಬರ್ 2 ರಂದು ಪ್ರಕಟವಾಗಿದ್ದ ಕಾರಣದಿಂದ ನವೆಂಬರ್ 20ರವರೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಲಾಗಿತ್ತು.
ರಾಜ್ಯಶಾಸ್ತ್ರ, ರಸಾಯನಶಾಸ್ತ್ರ, ಕಂಪ್ಯೂಟರ್ ವಿಜ್ಞಾನ, ಸಸ್ಯ ವಿಜ್ಞಾನ, ಅರ್ಥಶಾಸ್ತ್ರ, ಭೌತವಿಜ್ಞಾನ ಮೊದಲಾದ ವಿಷಯಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ತತ್ಸಮಾನ ವಿಷಯಗಳ ವಿದ್ಯಾರ್ಹತೆ ನೀಡಿ ನವೆಂಬರ್ 18 ರಂದು ರಾಜ್ಯಸರ್ಕಾರ ಅಧಿಸೂಚನೆ ಹೊರಡಿಸಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನವನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಈ ದಿನಾಂಕದೊಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.