alex Certify ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಗ್ರೂಪ್ ಡಿ ಹುದ್ದೆಗಳಿಗೆ ನೇರ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಗ್ರೂಪ್ ಡಿ ಹುದ್ದೆಗಳಿಗೆ ನೇರ ನೇಮಕಾತಿ

ಧಾರವಾಡ: ಕರ್ನಾಟಕ ನಾಗರೀಕ ಸೇವಾ ನೇರ ನೇಮಕಾತಿ(ಸಾಮಾನ್ಯ) ನಿಯಮಾವಳಿಗಳು 2021 ಹಾಗೂ ಸರ್ಕಾರದ ಅಧಿಸೂಚನೆ ಕರ್ನಾಟಕ ಅರಣ್ಯ ಇಲಾಖೆಯ ಧಾರವಾಡ ವೃತ್ತದಲ್ಲಿ ಖಾಲಿ ಇರುವ 7 ಅರಣ್ಯ ವೀಕ್ಷಕರ ಗ್ರುಪ್ ಡಿ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿಗಳನ್ನು ವೆಬ್‍ಸೈಟ್: https://aranya.gov.in/ ಮುಖಾಂತರ ಸೆಪ್ಟೆಂಬರ್ 27, 2023 ರಿಂದ ಅಕ್ಟೋಬರ್ 26, 2023 ರೊಳಗೆ ಸಲ್ಲಿಸಬೇಕು. ಅರ್ಜಿ ಶುಲ್ಕ ಪಾವತಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್‍ಲೈನ್ ವ್ಯವಸ್ಥೆಯ ಮೂಲಕ ಮಾತ್ರ ಸಲ್ಲಿಸಬೇಕು. ಸದರಿ ವ್ಯವಸ್ಥೆಯನ್ನು ಹೊರತುಪಡಿಸಿ ಇತರೆ ಯಾವುದೇ ಮೂಲಗಳಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...