alex Certify 4 ಸಾವಿರ ಪೊಲೀಸ್, 947 ಸಬ್ ಇನ್ಸ್ ಪೆಕ್ಟರ್ ನೇಮಕಾತಿ: ಗೃಹ ಸಚಿವ ಆರಗ ಜ್ಞಾನೇಂದ್ರ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

4 ಸಾವಿರ ಪೊಲೀಸ್, 947 ಸಬ್ ಇನ್ಸ್ ಪೆಕ್ಟರ್ ನೇಮಕಾತಿ: ಗೃಹ ಸಚಿವ ಆರಗ ಜ್ಞಾನೇಂದ್ರ ಮುಖ್ಯ ಮಾಹಿತಿ

ಬೆಂಗಳೂರು: ಪೊಲೀಸ್ ಕಾನ್ಸ್ ಟೇಬಲ್, ಸಬ್ಇನ್ಸ್ ಪೆಕ್ಟರ್ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದ್ದು, ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

4000 ನಾಗರಿಕ ಪೊಲೀಸ್ ಕಾನ್ಸ್ ಟೇಬಲ್, 947 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ನಿಯಮಾನುಸಾರ ನಡೆಯಲಿದೆ. ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಸೇರಿ ನೇಮಕಾತಿ ನಿಯಮಗಳ ಅನುಸಾರ ನಡೆಯಲಿದೆ.

ಅಭ್ಯರ್ಥಿಗಳು ಮತ್ತು ಅವರ ಪೋಷಕರು ಯಾವುದೇ ವದಂತಿಗೆ ಕಿವಿಗೊಡಬಾರದು. ಕೆಲವರು ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿರುವ ಪ್ರಕರಣಗಳು ಕಂಡುಬಂದಿವೆ. ಇಂತಹ ಯಾವುದೇ ಆಮಿಷಗಳಿಗೆ ಕಿವಿಗೊಡಬಾರದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...