ಮಂಗಳೂರು: ಶಿಕ್ಷಕರ ನೇಮಕಾತಿಗೆ ಶೀಘ್ರವೇ ಸಿಇಟಿ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಕುಕ್ಕೆಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಶಿಕ್ಷಕರ ನೇಮಕಾತಿ ಆಗಿಲ್ಲ. ಹೀಗಾಗಿ ಶಿಕ್ಷಕರ ಸಮಸ್ಯೆಯಾಗಿದ್ದು, ಶೀಘ್ರವೇ ಶಿಕ್ಷಕರ ನೇಮಕಾತಿಗೆ ಸಿಇಟಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ಈ ಹಿಂದೆ 10 ಸಾವಿರ ಶಿಕ್ಷಕರ ನೇಮಕಾತಿಗೆ ಟಿಇಟಿ ಮತ್ತು ಸಿಇಟಿ ನಡೆಸಲಾಗಿತ್ತು. ಕೇವಲ 3 ಸಾವಿರ ಅಭ್ಯರ್ಥಿಗಳು ಮಾತ್ರ ತೇರ್ಗಡೆಯಾಗಿದ್ದರು. ಈ ಕಾರಣದಿಂದಾಗಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.