alex Certify ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಚಿವರಿಂದ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಚಿವರಿಂದ ಸಿಹಿ ಸುದ್ದಿ

ಮಂಗಳೂರು: ಶಿಕ್ಷಕರ ನೇಮಕಾತಿಗೆ ಶೀಘ್ರವೇ ಸಿಇಟಿ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಕುಕ್ಕೆಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಶಿಕ್ಷಕರ ನೇಮಕಾತಿ ಆಗಿಲ್ಲ. ಹೀಗಾಗಿ ಶಿಕ್ಷಕರ ಸಮಸ್ಯೆಯಾಗಿದ್ದು, ಶೀಘ್ರವೇ ಶಿಕ್ಷಕರ ನೇಮಕಾತಿಗೆ ಸಿಇಟಿ ನಡೆಸಲಾಗುವುದು ಎಂದು ಹೇಳಿದ್ದಾರೆ.

ಈ ಹಿಂದೆ 10 ಸಾವಿರ ಶಿಕ್ಷಕರ ನೇಮಕಾತಿಗೆ ಟಿಇಟಿ ಮತ್ತು ಸಿಇಟಿ ನಡೆಸಲಾಗಿತ್ತು. ಕೇವಲ 3 ಸಾವಿರ ಅಭ್ಯರ್ಥಿಗಳು ಮಾತ್ರ ತೇರ್ಗಡೆಯಾಗಿದ್ದರು. ಈ ಕಾರಣದಿಂದಾಗಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...