alex Certify ಪದವಿ, ಪಿಜಿ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದವಿ, ಪಿಜಿ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಬ್ಯಾಂಕ್ ಆಫ್ ಬರೋಡಾ(BOB)ದಲ್ಲಿ 512 ಚೀಫ್ ಎಕನಾಮಿಸ್ಟ್, ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕನಿಷ್ಟ 23 ರಿಂದ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ.ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಓಬಿಸಿ, ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 600 ರೂ. ಮತ್ತು ಪ.ಜಾ/ಪ,ಪಂ/ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 100 ರೂ.  ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ/ಗುಂಪು ಚರ್ಚೆ ಮೂಲಕ ಆಯ್ಕೆ ಮಾಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.bankofbaroda.in/index.htm ಗಮನಿಸಬಹುದಾಗಿದೆ. ಆನ್‌ಲೈನ್ ಮೂಲಕ ಏಪ್ರಿಲ್ 29,2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...