alex Certify ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ: ಶಿಕ್ಷಕರು ಸೇರಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ: ಶಿಕ್ಷಕರು ಸೇರಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿ

ಮಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಮಾತನಾಡಿ, ಶಿಕ್ಷಕರು, ವೈದ್ಯರು ಸೇರಿದಂತೆ ಎಲ್ಲಾ ರೀತಿಯ ಹುದ್ದೆಗಳು ಖಾಲಿ ಇವೆ. ಹಂತ ಹಂತವಾಗಿ ಎಲ್ಲಾ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಖಾಲಿ ಹುದ್ದೆಗೆ ತಾತ್ಕಾಲಿಕವಾಗಿ ಹೊರಗುತ್ತಿಗೆ ತೆಗೆದುಕೊಳ್ಳಲು ಚಿಂತನೆ ನಡೆದಿದೆ. ಒಂದೇ ಬಾರಿಗೆ ಎರಡೂವರೆ ಲಕ್ಷ ಖಾಲಿ ಹುದ್ದೆಗಳ ಭರ್ತಿ ಸಾಧ್ಯವಿಲ್ಲ. ಹಾಗಾಗಿ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...