ಬೆಂಗಳೂರು : ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 13 ಸಾವಿರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ನಿರ್ವಾಹಕ, ಚಾಲಕ ಸೇರಿದಂತೆ ವಿವಿಧ 13 ಸಾವಿರ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದರು.
ಹಾಗೆಯೇ ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್ ಬಿಡಲಿದ್ದೇವೆ. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಹಾಗೆಯೇ ಖಾಸಗಿ ಬಸ್ ಗಳು ಹಾಗೂ ವಾಹನಗಳು ಹೆಚ್ಚುವರಿ ದರ ವಸೂಲಿ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ನೋಟಿಸ್ ಮೂಲಕ ಎಚ್ಚರಿಕೆ ನೀಡಲಾಗಿದೆ ಎಂದರು.