ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(KAT) ಮಧ್ಯಂತರ ತಡೆಯಾಜ್ಞೆ ನೀಡಿದೆ.
ರಾಜ್ಯದ 16 ಪದವಿ ಕಾಲೇಜುಗಳಲ್ಲಿ 19 ಮನಃಶಾಸ್ತ್ರ ಪ್ರಾಧ್ಯಾಪಕರ ಹುದ್ದೆಗಳನ್ನು ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ಹುದ್ದೆಗಳಿಗೆ ಪರಿವರ್ತಿಸಿರುವುದನ್ನು ಪ್ರಶ್ನಿಸಿ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ಸಲ್ಲಿಕೆಯಾದ ಅರ್ಜಿ ವಿಚಾರಣೆಯ ಹಂತದಲ್ಲಿದ್ದು, ಯಾವುದೇ ನೇಮಕಾತಿ ನಡೆಸದಂತೆ ಆದೇಶ ನೀಡಿದೆ. ಹೀಗಿದ್ದರೂ ಕೂಡ ಅಧಿಸೂಚನೆ ಹೊರಡಿಸಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಪ್ರಕ್ರಿಯೆಗೆ ತಡೆ ನೀಡಬೇಕೆಂದು ಕೋರಿ ಡಾ. ಮೀನಾಕ್ಷಿ ಇತರರು ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಕೆಎಟಿ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು ಹೇಳಲಾಗಿದೆ.