ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕು ಪಂಚಾಯತಿಗಳಿಗೆ ತಲಾ ಒಬ್ಬರು ಆಡಳಿತ ಸಹಾಯಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಈ ಕುರಿತಂತೆ ಜಿಲ್ಲಾ ಪಂಚಾಯಿತಿಗಳಿಗೆ ಅಧಿಕಾರ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 2020 21 ನೇ ಸಾಲಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಲಾಗಿದ್ದು, ಹೀಗೆ ಸೃಜನೆ ಮಾಡಿದ 205 ತಾಲೂಕುಗಳಿಗೆ ಆಡಳಿತ ಸಹಾಯಕರನ್ನು ನೇಮಕ ಮಾಡಿಕೊಳ್ಳಲಾಗುವುದು.
ನರೇಗಾ ಯೋಜನೆಯ ಅನುಷ್ಠಾನ ಕುರಿತ ಮೇಲ್ವಿಚಾರಣೆಗಾಗಿ ಆಡಳಿತ ಸಹಾಯಕರ ನೇಮಕಾತಿ ಮಾಡಿಕೊಳ್ಳಲಿದ್ದು, ಬಿಕಾಂ ಪದವಿ ಪಡೆದ, ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಎಂಎಸ್ ವರ್ಡ್, ಎಕ್ಸೆಲ್, ಪವರ್ ಪಾಯಿಂಟ್ ಪ್ರೆಸೆಂಟೇಶನ್ ಸೇರಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಎಂದು ಹೇಳಲಾಗಿದೆ.