alex Certify GOOD NEWS : ಶೀಘ್ರದಲ್ಲೇ 2400 ಪೊಲೀಸ್ ಕಾನ್ಸ್ ಟೇಬಲ್ ಗಳ ನೇಮಕ : ಸಿಎಂ ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಶೀಘ್ರದಲ್ಲೇ 2400 ಪೊಲೀಸ್ ಕಾನ್ಸ್ ಟೇಬಲ್ ಗಳ ನೇಮಕ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಶೀಘ್ರದಲ್ಲೇ 2400 ಪೊಲೀಸ್ ಕಾನ್ಸ್ ಟೇಬಲ್ ಗಳ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿ ನಂತರ ಮಾತನಾಡಿದರು.

ಶೀಘ್ರದಲ್ಲೇ 2400 ಪೊಲೀಸ್ ಕಾನ್ಸ್ ಟೇಬಲ್ ಗಳ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ, ಐದು ಸಂಚಾರಿ ಮತ್ತು ಆರು ಮಹಿಳಾ ಪೊಲೀಸ್ ಠಾಣೆ ಸ್ಥಾಪಿಸಲಾಗುತ್ತದೆ. ಗೃಹ 2025 ಯೋಜನೆ ಅಡಿಯಲ್ಲಿ 2, 225 ಪೊಲೀಸ್ ವಸತಿಗಾಗಿ 450ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಪೊಲೀಸ್ ಕ್ಯಾಂಟೀನ್ ಕಲ್ಪಿಸಲಾಗಿದೆ,
ಅಧಿಕಾರಿ ಕಚೇರಿ, ನಿರ್ವಹಣೆಗೆ ಕೂಡ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಏಳು ಸ್ಥಳಗಳಲ್ಲಿ ಪೊಲೀಸ್ ಪಬ್ಲಿಕ್ ಸ್ಕೂಲ್ ಓಪನ್ ಮಾಡಲಾಗುತ್ತಿದೆ. ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಂಬಸ್ಥರಿಗಾಗಿ ಆರೋಗ್ಯ ಭಾಗ್ಯ ಯೋಜನೆಯಡಿ 100 ಕೋಟಿ ಕೊಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...