ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ನೇರ ನೇಮಕಾತಿ ಕೋಟಾದ ಒಟ್ಟು ಹುದ್ದೆಗಳ ಪೈಕಿ ಈಗ 814 ಉಪನ್ಯಾಸಕರ ಹುದ್ದೆ ಭರ್ತಿ ಮಾಡಲು ಇಲಾಖೆ ಮುಂದಾಗಿದೆ.
814 ಉಪನ್ಯಾಸಕರ ಹುದ್ದೆ ಭರ್ತಿ ಮಾಡಲು ಇಲಾಖೆ ಮುಂದಾಗಿದ್ದು, ಇದಕ್ಕೆ ಸರ್ಕಾರದ ಅನುಮತಿಯನ್ನು ಸಹ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸದನದಲ್ಲಿ ಮಾತನಾಡಿದ ಸಚಿವರು ಪದವಿ ಪೂರ್ವ ಕಾಲೇಜುಗಳಲ್ಲಿ ಒಟ್ಟಾರೆ 4259 ಉಪನ್ಯಾಸಕರ ಕೊರತೆ ಇದೆ. ಆದರೆ ಅವುಗಳಲ್ಲಿ ಈಗ 814 ಹುದ್ದೆ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿದೆ . 814 ಹುದ್ದೆ ಭರ್ತಿ ಮಾಡಲಾಗುತ್ತದೆ ಎಂದರು. ಸ್ನಾತಕೋತ್ತರ ಪದವಿ ಜತೆಗೆ, ಬಿ.ಇಡಿ ಪಾಸಾದವರು ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.