alex Certify ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ಶಾಲಾ ಶಿಕ್ಷಣ ಇಲಾಖೆಯಿಂದ `ವಿವಾಹಿತ ಮಹಿಳಾ ಅಭ್ಯರ್ಥಿ’ಗಳಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ಶಾಲಾ ಶಿಕ್ಷಣ ಇಲಾಖೆಯಿಂದ `ವಿವಾಹಿತ ಮಹಿಳಾ ಅಭ್ಯರ್ಥಿ’ಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಆನ್ ಲೈನ್ ಅರ್ಜಿ ಸಲ್ಲಿಸಿರುವ ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಮಹಿಳಾ ಅಭ್ಯರ್ಥಿಗಳು ನಮೂದಿಸಿದ ಜಾತಿ ಮತ್ತು ಆಧಾಯ ಪ್ರಮಾಣ ಪತ್ರ (ಗಂಡನ ಆದಾಯ/ತಂದೆಯ ಆದಾಯ ಪ್ರಮಾಣ ಪತ್ರ) ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ-2022(GPTR- 2022)ಕ್ಕೆ ಸಂಬಂಧಿಸಿದಂತೆ 1:2 ಅನುಪಾತದ ಅಭ್ಯರ್ಥಿಗಳ ಮೂಲದಾಖಲೆಗಳ ಪರಿಶೀಲನಾ ವೇಳೆಯಲ್ಲಿ ಆನ್‌ಲೈನ್‌ ಅರ್ಜಿಯಲ್ಲಿ ವಿವಾಹಿತರೆಂದು ನಮೂದಿಸಿ, ಜಾತಿ ಮೀಸಲಾತಿಯನ್ನು ಕ್ಲೇಮು ಮಾಡಿರುವ ವಿವಾಹಿತ ಮಹಿಳಾ ಅಭ್ಯರ್ಥಿಗಳು ತಂದೆಯ/ಪೋಷಕರ ಹೆಸರಿನಲ್ಲಿ ಪಡೆದ ಜಾತಿ ಆದಾಯ ಪ್ರಮಾಣ ಪತ್ರ ಸಲ್ಲಿಸಿದವರು ಅಥವಾ ಪತಿಯ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಿದವರ ಮಾಹಿತಿಯನ್ನು ಈ ಪತ್ರದೊಂದಿಗೆ ಆಯಾ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರ ರವರ ಕಛೇರಿಗೆ ಸಿ.ಎ.ಸಿ ಯಿಂದ ಇ-ಮೇಲ್ ಮಾಡಲಾದ ನಮೂನೆ ಮಾಹಿತಿಯನ್ನು ಭರ್ತಿ ಮಾಡಿ ಅತ್ಯಾದ್ಯತೆಯೆಂದು ಪರಿಗಣಿಸಿ ದಿನಾಂಕ:09/07/2023 ಬೆಳಗ್ಗೆ 11.30 ರ ಒಳಗಾಗಿ ತಪ್ಪದೇ ಕಛೇರಿಯ ಇ-ಮೇಲ್ ವಿಳಾಸ cackarnataka1@gmail.comಕ್ಕೆ Soft Copy ಮತ್ತು ದೃಢೀಕೃತ ಮಾಹಿತಿಯನ್ನು ಕಳುಹಿಸಲು ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...