ಬೆಂಗಳೂರು : ‘ಗ್ಯಾರಂಟಿ ಯೋಜನೆʼ ಸಮೀಕ್ಷೆಗೆ ಸ್ವಯಂ ಸೇವಕರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗೃಹಲಕ್ಷ್ಮಿ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನ ಮತ್ತು ಅನ್ನಭಾಗ್ಯ ಯೋಜನೆಗಳನ್ನು ರೂಪಿಸಿದೆ. ರಾಜ್ಯದ ಪ್ರತಿ ಮನೆ ಮನೆಗೂ ಈ ಐದು ಗ್ಯಾರಂಟಿ ಯೋಜನೆಗಳು ಸರಿಯಾದ ರೀತಿಯಲ್ಲಿ ತಲುಪಿವೆಯೇ ಎಂಬ ಬಗ್ಗೆ ರಾಜ್ಯ ವ್ಯಾಪ್ತಿ ಸಮೀಕ್ಷೆ ಮಾಡಲು “ಗ್ಯಾರಂಟಿ ಸ್ವಯಂ ಸೇವಕರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ.
ಏನಿದೆ ಆದೇಶದಲ್ಲಿ..?
ಸರ್ಕಾರವು ಬಡವರ ಹಾಗೂ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ ಯೋಜನ, ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನ ಮತ್ತು ಅನ್ನಭಾಗ್ಯ ಯೋಜನೆಗಳನ್ನು ರೂಪಿಸಿದೆ. ರಾಜ್ಯದ ಪ್ರತಿ ಮನೆ ಮನೆಗೂ ಈ ಐದು ಗ್ಯಾರಂಟಿ ಯೋಜನೆಗಳು ಸರಿಯಾದ ರೀತಿಯಲ್ಲಿ ತಲುಪಿವೆಯೇ ಎಂಬ ಬಗ್ಗೆ ರಾಜ್ಯ ವ್ಯಾಪ್ತಿ ಸಮೀಕ್ಷೆ ಮಾಡಲು “ಗ್ಯಾರಂಟಿ ಸ್ವಯಂ ಸೇವಕರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ.
ಮುಂದುವರೆದು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರ ಇಲಾಖೆಗಳ ಸಿಬ್ಬಂದಿಗಳನ್ನು “ಗ್ಯಾರಂಟಿ ಸ್ವಯಂ-ಸೇವಕರಾಗಿ ನೇಮಿಸಿ ಅವರುಗಳು ಪ್ರತಿ ಮನೆ ಮನೆಗೂ ಭೇಟಿ ನೀಡಿ ಗ್ಯಾರಂಟಿ ಯೋಜನೆಗಳು ತಲುಪಿರುವ ಬಗ್ಗೆ ಹಾಗೂ ಸದರಿ ಯೋಜನೆಗಳ ಬಗ್ಗೆ ಜನರ ಅಭಿಪ್ರಾಯ ಮತ್ತು ಅದರ ಸದ್ಬಳಕೆ ಆಗುತ್ತಿರುವ ಕುರಿತು ಒಂದು ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವುದು. ಸದರಿ ಕೆಲಸಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರ ಇಲಾಖೆಗಳ ಸಿಬ್ಬಂದಿಗಳಿಗೆ ಹೆಚ್ಚುವರಿ ಪ್ರೋತ್ಸಾಹ ಧನವನ್ನು ಸಹ ನೀಡಲು ತೀರ್ಮಾನಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2023-24ನೇ ಸಾಲಿನ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ. ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳು ಸರಿಯಾದ ರೀತಿಯಲ್ಲಿ ಫಲಾನುಭವಿಗಳಿಗೆ ತಲುಪಿರುವ ಕುರಿತಂತೆ ಮನೆ ಮನೆಗಳಿಗೆ ತೆರಳಿ ಅಂಗನವಾಡಿ ಕಾರ್ಯಕರ್ತೆಯರು, ಕಾರ್ಯಕರ್ತೆಯರು ಹಾಗೂ 20 ಸಿಬ್ಬಂದಿಗಳನ್ನೊಳಗೊಂಡಂತೆ 1.2 ಲಕ್ಷ “ಗ್ಯಾರಂಟಿ ಸ್ವಯಂ ಸೇವಕರಿಂದ 10 ರಿಂದ 15 ದಿನಗಳ ಅವಧಿಯಲ್ಲಿ ಒಂದು ಬಾರಿ ಒಬ್ಬರಿಗೆ ಮಾತ್ರ ರೂ. 1000/- ದಂತೆ ಪ್ರೋತ್ಸಾಹಧನ ನೀಡಿ ರಾಜ್ಯ ವ್ಯಾಪ್ತಿ ಸಮೀಕ್ಷೆ ನಡೆಸಲು ಈ ಕೆಳಕಂಡ ಷರತ್ತಿಗೊಳಪಟ್ಟು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ.
ಸಮೀಕ್ಷೆ ಕಾರ್ಯ ಜಿಲ್ಲಾಧಿಕಾರಿಗಳು ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ನಡೆಯತಕ್ಕದ್ದು. ಈ ಸಮೀಕ್ಷೆಗೆ ಪ್ರತಿ “ಗ್ಯಾರಂಟಿ ಸ್ವಯಂ ಸೇವಕರಿಗೆ 100 ರಿಂದ 120 ಮನೆಗಳನ್ನು ಹಂಚಿಕೆ ಮಾಡುವುದು ಎಂದು ಸೂಚನೆ ನೀಡಲಾಗಿದೆ.