ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ. ಸಾರಿಗೆ ಇಲಾಖೆಯಲ್ಲಿ 8000 ಹುದ್ದೆಗಳ ಖಾತೆಗೆ ಸೂಚನೆ ನೀಡಲಾಗಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿದ್ದು, 2016 ರಿಂದ ಇದುವರೆಗೆ ಸುಮಾರು 13,800 ನೌಕರರು ನಿವೃತ್ತರಾಗಿದ್ದು, ಮೊದಲ ಹಂತದಲ್ಲಿ 8000 ಹುದ್ದೆಗಳ ನೇಮಕಾತಿಗೆ ಸೂಚನೆ ನೀಡಲಾಗಿದೆ. ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಕೆಎಸ್ಆರ್ಟಿಸಿ 2000 ಚಾಲಕ ಕಂ ನಿರ್ವಾಹಕರು, 300 ತಾಂತ್ರಿಕ ಸಿಬ್ಬಂದಿ, ಬಿಎಂಟಿಸಿ 2,500 ನಿರ್ವಾಹಕರು, ವಾಯುವ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ 2000 ಚಾಲಕ ಕಂ ನಿರ್ವಾಹಕರು, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 300 ನಿವಾಹಕರ ನೇಮಕಾತಿ ಮಾಡಿಕೊಳ್ಳಲಾಗುವುದು. ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 1619 ಚಾಲನಾ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ತಿಳಿಸಿದ್ದಾರೆ.