
ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿ ಒಳ ಮೀಸಲಾತಿ ನಿರ್ಧಾರವಾಗುವವರೆಗೆ ನೇರ ನೇಮಕಾತಿ ಮಾಡದಿರಲು 2024ರ ನವೆಂಬರ್ 25 ರಂದು ಆದೇಶ ಹೊರಡಿಸಲಾಗಿದೆ. ಹೀಗಿದ್ದರೂ ಕೆಲವು ನೇಮಕಾತಿ ಪ್ರಾಧಿಕಾರಗಳು ಹೊಸ ಅಧಿಸೂಚನೆ ಹೊರಡಿಸಿದ್ದು, ಅಂತಹ ಅಧಿಸೂಚನೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಒಳ ಮೀಸಲಾತಿ ನಿರ್ಧರಿಸುವವರೆಗೆ ಮೀಸಲಾತಿ ಅನ್ವಯವಾಗುವ ಹುದ್ದೆಗಳಿಗೆ ಮುಂದಿನ ಆದೇಶದವರೆಗೆ ಯಾವುದೇ ನೇರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು ಎಂದು 2024ರ ನವೆಂಬರ್ 25 ರಂದು ಅಧಿಸೂಚನೆ ಹೊರಡಿಸಲಾಗಿದ್ದರೂ ಕೆಲವು ನೇಮಕಾತಿ ಪ್ರಾಧಿಕಾರಗಳು ನಿಯಮ ಉಲ್ಲಂಘಿಸಿ ನೇರ ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸಲಾಗಿದೆ.
ಇದು ಸರ್ಕಾರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ನವೆಂಬರ್ 25 ರ ನಂತರ ನೇರ ನೇಮಕಾತಿಗೆ ಯಾವುದೇ ಹೊಸ ಅಧಿಸೂಚನೆ ಹೊರಡಿಸಿದ್ದಲ್ಲಿ ತಕ್ಷಣ ಜಾರಿಗೆ ಬರುವಂತೆ ರದ್ದುಪಡಿಸಲು ಸೂಚಿಸಲಾಗಿದೆ. ನೇಮಕಾತಿ ಪ್ರಾಧಿಕಾರಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಆಯಾ ಆಡಳಿತ ಇಲಾಖೆ ಕಾರ್ಯದರ್ಶಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚನೆ ನೀಡಿದೆ.