alex Certify ಗುಡ್ ನ್ಯೂಸ್: ಸಹಕಾರ ಇಲಾಖೆಯಲ್ಲಿ 5000 ಹುದ್ದೆಗಳ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಸಹಕಾರ ಇಲಾಖೆಯಲ್ಲಿ 5000 ಹುದ್ದೆಗಳ ನೇಮಕಾತಿ

ತುಮಕೂರು: ರಾಜ್ಯದ ಸಹಕಾರ ಕ್ಷೇತ್ರದ ಬ್ಯಾಂಕ್ ಗಳಲ್ಲಿ 5000 ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ತುಮಕೂರು ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2000 ಹುದ್ದೆಗಳ ಭರ್ತಿಗೆ ಸಹಕಾರ ಇಲಾಖೆ ಅನುಮತಿ ನೀಡಿದ್ದು, ಖಾಲಿ ಇರುವ 5000 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಗ್ರಾಮ ಪಂಚಾಯಿತಿಗೆ ಒಂದರಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಶಾಖೆ ತೆರೆಯಲಾಗುವುದು. ಅಪೆಕ್ಸ್ ಬ್ಯಾಂಕ್, 21 ಡಿಸಿಸಿ ಬ್ಯಾಂಕ್ ಸೇರಿದಂತೆ 5000 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಒಂದೇ ತಂತ್ರಾಂಶದಡಿ ತರುವ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...