ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಗ್ರಾ.ಪಂ. ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದಕ್ಕೆ ಸೇವೆಯೊಳಗಿನ ನೇರ ನೇಮಕಾತಿ ಮಾಡುವುದನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.
ಜಿಲ್ಲಾ ಪಂಚಾಯಿತಿಗಳಲ್ಲಿ ವಿವಿಧ ರೀತಿಯಲ್ಲಿ ನೇಮಕ ಆದೇಶ ಹೊರಡಿಸುತ್ತಿರುವುದರಿಂದ ಅರ್ಹ ನೌಕರರಿಗೆ ಅನ್ಯಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಅಭಿಪ್ರಾಯ ಬರುವವರೆಗೆ ಗ್ರಾಫಂ ಕಾರ್ಯದರ್ಶಿ ಗ್ರೇಡ್ 2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ನೇಮಕ ಮಾಡುವುದನ್ನು ತಡೆಹಿಡಿಯಬೇಕೆಂದು ಹೇಳಲಾಗಿದೆ.
ಈ ಹುದ್ದೆಗಳಿಗೆ ನೇಮಕಾತಿ ಬಗ್ಗೆ ಏಕರೂಪ ಮಾರ್ಗಸೂಚಿ ಹೊರಡಿಸಲು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿ ಇರುವುದರಿಂದ ಈಗಾಗಲೇ ನೇಮಕ ಮಾಡಲಾದ ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ ಜಿಲ್ಲೆಗಳಲ್ಲಿ ಸೇವೆಯೊಳಗೆ ನೇರ ನೇಮಕಾತಿಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಮತ್ತು ಉಪ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.