ಬೆಳಗಾವಿ(ಸುವರ್ಣಸೌಧ): 2000 ಸರ್ವೇಯರ್ ಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 600 ಸರ್ವೇಯರ್ ಗಳ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ರವೀಂದ್ರ ಶ್ರೀಕಂಠಯ್ಯ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ ಸಚಿವರು, 2000 ಸರ್ವೇಯರ್ ಗಳ ನೇಮಕ ಪ್ರಕ್ರಿಯೆ ನಡೆದಿದೆ. 600 ಸರ್ವೇಯರ್ ಗಳ ನೇಮಕಾತಿ ಮಾಡಿಕೊಂಡಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಸರ್ವೇ, ಪೋಡಿ ಸಮಸ್ಯೆ ಬಗೆಹರಿಸಲು ಹೊಸ ಮಸೂದೆ ತರುವುದಾಗಿ ಹೇಳಿದ್ದಾರೆ.
ಶಾಸಕ ಕುಮಾರ್ ಬಂಗಾರಪ್ಪ ಅವರ ಸೂಚನೆಗೆ ಉತ್ತರಿಸಿದ ಸಚಿವರು, ನೀತಿ ಸಂಹಿತೆ ಮುಗಿದ ನಂತರ ಗ್ರಾಮ ಲೆಕ್ಕಿಗರ ನೇಮಕಾತಿ ಪ್ರಕ್ರಿಯೆ ಕೂಡ ಆರಂಭವಾಗಲಿದೆ ಎಂದು ಹೇಳಿದ್ದಾರೆ.