alex Certify 2000 ವೈದ್ಯರು, 700 ನರ್ಸಿಂಗ್ ಸಿಬ್ಬಂದಿ ನೇಮಕಾತಿ: ಸಚಿವ ಸುಧಾಕರ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2000 ವೈದ್ಯರು, 700 ನರ್ಸಿಂಗ್ ಸಿಬ್ಬಂದಿ ನೇಮಕಾತಿ: ಸಚಿವ ಸುಧಾಕರ್ ಮಾಹಿತಿ

ಬಳ್ಳಾರಿ: ತಿಂಗಳೊಳಗೆ 2000 ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಬಳ್ಳಾರಿ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಎಂ.ಆರ್.ಐ., ಉಪನ್ಯಾಸ, ಪರೀಕ್ಷಾ ಸಭಾಂಗಣ, ರಂಗಮಂದಿರ, ಹಾಸ್ಟೆಲ್ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ವರ್ಚುವಲ್ ಮೂಲಕ ನೆರವೇರಿಸಿ ಅವರು ಮಾತನಾಡಿದರು.

ಎರಡು ಸಾವಿರಕ್ಕೂ ಹೆಚ್ಚು ವೈದ್ಯರು, 700 ಕ್ಕೂ ಹೆಚ್ಚು ಪ್ಯಾರಾಮೆಡಿಕಲ್ ಮತ್ತು ನರ್ಸಿಂಗ್ ಸಿಬ್ಬಂದಿಯನ್ನು ಒಂದು ತಿಂಗಳೊಳಗೆ ನೇಮಕಾತಿ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ವೈದ್ಯರಿಗೆ ಉತ್ತೇಜನ ನೀಡಲು ವೇತನ ಹೆಚ್ಚಳ, ಬಡ್ತಿ ನೀಡಲಾಗುವುದು. ಖಾಸಗಿ, ಸರ್ಕಾರಿ ಸಹಭಾಗಿತ್ವದಲ್ಲಿ ಆರೋಗ್ಯ ಕ್ಷೇತ್ರ ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...