
ಚಿಂತಾಮಣಿ: ರಾಜ್ಯದಲ್ಲಿ ವೈದ್ಯರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಒಂದು ತಿಂಗಳಲ್ಲಿ 2500 ವೈದ್ಯರ ನೇರ ನೇಮಕಾತಿ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಚಿಂತಾಮಣಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿ ಉದ್ಘಾಟನೆ ಮತ್ತು ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಗ್ರಾಮಾಂತರ ಪ್ರದೇಶದಲ್ಲಿನ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ನೀಗಿಸುವ ಉದ್ದೇಶದಿಂದ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮುಂದಿನ ಒಂದು ತಿಂಗಳೊಳಗೆ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.