ಬೆಂಗಳೂರು: ವಸತಿ ಶಾಲೆ -ಕಾಲೇಜುಗಳ 808 ಹುದ್ದೆ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆ ಉನ್ನತೀಕರಣ, ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ದ್ವಿಗುಣ, ಹೊಸದಾಗಿ 10 ವಸತಿ ಶಾಲೆ ಆರಂಭಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ 708 ಹೊರಗುತ್ತಿಗೆ, 100 ಕಾಯಂ ಹುದ್ದೆಗಳು ಸೇರಿ 808 ಹುದ್ದೆಗಳ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.
10 ಪ್ರಾಂಶುಪಾಲರು, 248 ಉಪನ್ಯಾಸಕರು, 60 ಶಿಕ್ಷಕರು ಸೇರಿ 808 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು. 10 ಹೊಸ ಮೊರಾರ್ಜಿ ದೇಸಾಯಿ ಶಾಲೆಗೆ 100 ಹುದ್ದೆಗಳನ್ನು ಕೆ.ಪಿ.ಎಸ್.ಸಿ. ಮೂಲಕ ನೇಮಕ ಮಾಡಿಕೊಳ್ಳಲು ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಹೇಳಿದ್ದಾರೆ.