
ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮುಂಗಾರು ಮಳೆ ಬಿರುಸುಗೊಂಡಿದ್ದು, ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಜೂನ್ 15 ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿಯಲ್ಲಿ ಜೂನ್ 18 ರವರೆಗೆ ಹೆಚ್ಚಿನ ಮಳೆಯಾಗಬಹುದು. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಹೆಚ್ಚಿನ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಜೂನ್ 17 ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ವಿಜಯಪುರ ಮೊದಲಾದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.