ಭಾರತದ ಬಹುತೇಕ ಮನೆಗಳನ್ನು ಎಲ್.ಪಿ.ಜಿ. ಸಿಲಿಂಡರ್ ಪ್ರವೇಶ ಮಾಡಿದೆ. ಎಲ್.ಪಿ.ಜಿ. ಸಿಲಿಂಡರ್ ಬುಕ್ ಮಾಡುವುದು ಇನ್ಮುಂದೆ ಮತ್ತಷ್ಟು ಸುಲಭವಾಗಲಿದೆ. ಒಂದೇ ಒಂದು ಮಿಸ್ಡ್ ಕಾಲ್ ಗೆ ಎಲ್.ಪಿ.ಜಿ. ಸಿಲಿಂಡರ್ ಬುಕ್ ಮಾಡಬಹುದಾಗಿದೆ. ಇಂಡಿಯನ್ ಆಯಿಲ್ ತನ್ನ ಗ್ರಾಹಕರಿಗೆ ಈ ಸೇವೆಯನ್ನು ಒದಗಿಸುತ್ತಿದೆ.
ಮಿಸ್ಡ್ ಕಾಲ್ ಮೂಲಕ ಎಲ್‌ಪಿಜಿ ಸಿಲಿಂಡರ್‌ಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಈ ವರ್ಷದ ಫೆಬ್ರವರಿಯಲ್ಲಿಯೇ ಐಒಸಿ ಪ್ರಾರಂಭಿಸಿದೆ. ಹಿಂದೆ ಗ್ರಾಹಕರು ಕಸ್ಟಮರ್ ಕೇರ್ ಗೆ ಕರೆ ಮಾಡಿ,ದೀರ್ಘಕಾಲದವರೆಗೆ ಕಾಯಬೇಕಾಗಿತ್ತು. ಆದರೆ ಈಗ ಹಾಗೆ ಮಾಡುವ ಅಗತ್ಯವಿಲ್ಲ. ಇನ್ಮುಂದೆ ಕೇವಲ ಒಂದು ಮಿಸ್ಡ್ ಕಾಲ್ ನೀಡುವ ಮೂಲಕ ಗ್ಯಾಸ್ ಸಿಲಿಂಡರ್ ನಿಮ್ಮ ಮನೆಗೆ ಬರುವಂತೆ ಮಾಡಬಹುದು.
ಗ್ರಾಹಕರು 8454955555ಗೆ ಮಿಸ್ಡ್ ಕಾಲ್ ನೀಡಬೇಕು. ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಈ ಸಂಖ್ಯೆಗೆ ಕರೆ ಮಾಡಬೇಕು. ಇದಕ್ಕಾಗಿ ಗ್ರಾಹಕರು ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಐಒಸಿ, ಎಚ್‌ಪಿಸಿಎಲ್ ಮತ್ತು ಬಿಪಿಸಿಎಲ್ ಗ್ರಾಹಕರು ಎಸ್‌ಎಂಎಸ್ ಮತ್ತು ವಾಟ್ಸಾಪ್ ಮೂಲಕ ಗ್ಯಾಸ್ ಸಿಲಿಂಡರ್‌ಗಳನ್ನು ಸಹ ಕಾಯ್ದಿರಿಸಬಹುದು. ಐಒಸಿ, ಎಚ್‌ಪಿಸಿಎಲ್ ಮತ್ತು ಬಿಪಿಸಿಎಲ್ ಗ್ರಾಹಕರು ಎಸ್‌ಎಂಎಸ್ ಮತ್ತು ವಾಟ್ಸಾಪ್ ಮೂಲಕ ಗ್ಯಾಸ್ ಸಿಲಿಂಡರ್ ಕಾಯ್ದಿರಿಸಬಹುದು.