ಬೆಂಗಳೂರು: ಬೆಂಗಳೂರಿನಲ್ಲಿ ಪ್ರಾದೇಶಿಕ ಸೆನ್ಸಾರ್ ಅಧಿಕಾರಿ ಸಿಬಿಐ ಬಲೆಗೆ ಬಿದ್ದಿದ್ದಾರೆ. 12,000 ರೂ. ಲಂಚ ಸ್ವೀಕರಿಸುವಾಗ ಪ್ರಾದೇಶಿಕ ಸೆನ್ಸಾರ್ ಅಧಿಕಾರಿ ಪ್ರಶಾಂತ್ ಕುಮಾರ್ ಅವರು ಸಿಬಿಐ ಬಲೆಗೆ ಬಿದ್ದಿದ್ದಾರೆ.
‘ಅಡವಿ’ ಸಿನಿಮಾಗೆ ಸೆನ್ಸಾರ್ ಸರ್ಟಿಫಿಕೇಟ್ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಮಲ್ಲೇಶ್ವರಂ ಎಸ್.ಆರ್.ವಿ. ಸ್ಟುಡಿಯೋದಲ್ಲಿ ಪ್ರಶಾಂತ್ ಕುಮಾರ್ ಸಿಕ್ಕಿಬಿದ್ದಿದ್ದಾರೆ. ಒಂದು ವಾರದಿಂದ ಸೆನ್ಸಾರ್ ಸರ್ಟಿಫಿಕೇಟ್ ನೀಡದೆ ಸತಾಯಿಸಿದ್ದರು. ಅವರ ಕಿರುಕುಳದಿಂದ ಬೇಸತ್ತು ‘ಅಡವಿ’ ನಿರ್ಮಾಪಕ ಟೈಗರ್ ನಾಗ್ ಸಿಬಿಐಗೆ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿದ 10ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ.