ಬೆಂಗಳೂರು: ಮುಂದಿನ ವರ್ಷದ ಮಾರ್ಚ್ ನಲ್ಲಿ ನಡೆಯಲಿರುವ 2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಕ್ಕೆ ಹೆಸರು ನೋಂದಾಯಿಸಿಕೊಳ್ಳಲು ನ. 30ರವರೆಗೆ ಗಡುವು ವಿಸ್ತರಿಸಲಾಗಿದೆ.
ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳಿಗೆ ಹೆಸರು ನೋಂದಾಯಿಸಿಕೊಳ್ಳಲು ನವೆಂಬರ್ 30ರವರೆಗೆ ಅವಕಾಶ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಈ ಮೊದಲು ನವೆಂಬರ್ 30ರವರೆಗೆ ಪರೀಕ್ಷೆಗೆ ಹೆಸರು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಕೆಲವು ಶಾಲೆಗಳು ಮತ್ತು ಪೋಷಕರು ಗಡುವು ವಿಸ್ತರಣೆಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ನವೆಂಬರ್ 30ರ ನಂತರ ಮತ್ತೆ ಕಾಲಾವಕಾಶ ವಿಸ್ತರಿಸುವುದಿಲ್ಲವೆಂದು ಹೇಳಲಾಗಿದೆ.