ಬೆಂಗಳೂರು : ಕಲ್ಯಾಣ ಕರ್ನಾಟಕದಲ್ಲಿ ಯುವನಿಧಿʼ ಯೋಜನೆಯಡಿ 49,691 ಅಭ್ಯರ್ಥಿಗಳ ನೊಂದಣಿಯಾಗಿದ್ದು, 28.39 ಕೋಟಿ ರೂ. ಹಣ ಜಮಾ ಮಾಡಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
2022-23ನೇ ಶೈಕ್ಷಣಿಕ ಸಾಲಿನಲ್ಲಿ ಡಿಪ್ಲೋಮಾ ಮತ್ತು ಪದವಿ ಉತ್ತೀರ್ಣರಾದ ನಿರುದ್ಯೋಗಿಗಳಿಗೆ ಕ್ರಮವಾಗಿ ಮಾಸಿಕ 1,500 ಮತ್ತು 3,000 ಭತ್ಯೆ ನೀಡುವ ʼಯುವನಿಧಿʼ ಯೋಜನೆಯಡಿ ಇದುವರೆಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 49,691 ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಇದರಲ್ಲಿ ಅರ್ಹ 22,272 ನಿರುದ್ಯೋಗಿಗಳಿಗೆ 28.39 ಕೋಟಿ ರೂ.ಗಳನ್ನು ಡಿ.ಬಿ.ಟಿ. ಮೂಲಕ ಹಣ ಪಾವತಿಸಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.