ಬೆಂಗಳೂರು : ‘ಗೃಹಲಕ್ಷ್ಮಿ’ ನೋಂದಣಿ ಪ್ರಕ್ರಿಯೆ ಶೀಘ್ರದಲ್ಲೇ ಪುನಾರಂಭಗೊಳ್ಳಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯ ಸರ್ಕಾರ ಸದ್ಯ ಗೃಹಲಕ್ಷ್ಮಿ’ ನೋಂದಣಿ ಪ್ರಕ್ರಿಯೆಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ. ಈ ಹಿನ್ನೆಲೆ ಸ್ಪಷ್ಟನೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಗೃಹಲಕ್ಷ್ಮಿ’ ನೋಂದಣಿ ಪ್ರಕ್ರಿಯೆ ಶೀಘ್ರದಲ್ಲೇ ಪುನಾರಂಭಗೊಳ್ಳಲಿದೆ, ಮಹಿಳೆಯರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಈಗಾಗಲೇ 2 ಸಾವಿರ ರೂ. ಜಮೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಗೊಂದಲವಾಗದಿರಲಿ ಎಂದು ರಾಜ್ಯ ಸರ್ಕಾರ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.. 1.28 ಕೋಟಿ ಫಲಾನುಭವಿಗಳ ಪೈಕಿ 1.13 ಕೋಟಿ ನೋಂದಣಿಯಾಗಿದೆ. 17 ಲಕ್ಷ ಫಲಾನುಭವಿಗಳು ಬ್ಯಾಂಕ್ ಅಕೌಂಟ್, ಕೆವೈಸಿ ಅಪ್ಡೇಟ್ ಮಾಡಿಸಿಲ್ಲ . ನೋಂದಾಯಿತ ಫಲಾನುಭವಿಗಳಿಗೆ 2 ಸಾವಿರ ರೂ. ಜಮೆ ಆದ ನಂತರ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಪುನಾರಂಭಗೊಳ್ಳಲಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ನೋಂದಣಿ ಪುನರಾರಂಭಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಟ್ವೀಟ್ ಮಾಡಿದೆ.