
ನವದೆಹಲಿ: ದೆಹಲಿ ಬಿಜೆಪಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರನ್ನು ಆಯ್ಕೆ ಮಾಡಲಾಗಿದೆ.
27 ವರ್ಷಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಸರ್ಕಾರವನ್ನು ಮುನ್ನಡೆಸಲು ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ.
ಇದೀಗ ದೆಹಲಿ ಮುಖ್ಯಮಂತ್ರಿ ಘೋಷಣೆ ಮಾಡಲಾಗಿದ್ದು, ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕಿ ರೇಖಾ ಗುಪ್ತಾ ಅವರನ್ನು ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಹೆಸರಿಸಲಾಗಿದೆ. ಬುಧವಾರ ಸಂಜೆ ಪಕ್ಷದ ದೆಹಲಿ ಘಟಕದ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಈ ಘೋಷಣೆ ಹೊರಬಿದ್ದಿದೆ.
ಶಾಲಿಮಾರ್ ಬಾಗ್ ಕ್ಷೇತ್ರದ ಶಾಸಕಿಯಾಗಿರುವ 50 ವರ್ಷದ ಗುಪ್ತಾ, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕಿ ಬಂದಾನ ಕುಮಾರಿ ಅವರನ್ನು ಸೋಲಿಸಿದ್ದಾರೆ.
ರೇಖಾ ಗುಪ್ತಾ ಅವರಲ್ಲದೆ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ ಪರ್ವೇಶ್ ವರ್ಮಾ; ದೆಹಲಿ ಬಿಜೆಪಿಯ ಮಾಜಿ ಅಧ್ಯಕ್ಷರಾದ ವಿಜೇಂದರ್ ಗುಪ್ತಾ ಮತ್ತು ಸತೀಶ್ ಉಪಾಧ್ಯಾಯ; ಮತ್ತು ಪವನ್ ಶರ್ಮಾ, ಆಶಿಶ್ ಸೂದ್ ಮತ್ತು ಶಿಖಾ ರೈ ಅವರಂತಹ ಇತರ ನಾಯಕರು ರಾಷ್ಟ್ರ ರಾಜಧಾನಿಯ ರಾಜಕೀಯದಲ್ಲಿ ಉನ್ನತ ಹುದ್ದೆಗೆ ಸ್ಪರ್ಧೆಯಲ್ಲಿದ್ದರು. ಫೆಬ್ರವರಿ 5 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸೋಲಿಸಿ ಬಿಜೆಪಿ 26 ವರ್ಷಗಳ ನಂತರ ಅಧಿಕಾರಕ್ಕೆ ಬಂದಿದೆ.
ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡುತ್ತಿದ್ದಂತೆ ಅವರ ನಿವಾಸದ ಬಳಿ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ.
#WATCH | BJP MLA elect Rekha Gupta to become the CM of Delhi; visuals of celebrations from outside her residence. pic.twitter.com/C6FeRy9JMw
— ANI (@ANI) February 19, 2025