
ಬೆಂಗಳೂರು: ಹಾಡಹಗಲೇ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಟನ್ ಪೇಟೆ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಇದುವರೆಗೆ 50 ಕ್ಕೂ ಹೆಚ್ಚು ಜನರು ವಿಚಾರಣೆ ನಡೆಸಿದ ಪೊಲೀಸರು ಪ್ರತ್ಯಕ್ಷದರ್ಶಿಗಳು ಮತ್ತು ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಕೊಲೆ ಆರೋಪಿಗಳ ಕುರಿತಾಗಿ ಪೋಲೀಸಿಗೆ ಮಾಹಿತಿ ದೊರೆತಿದ್ದು, ಹತ್ಯೆಯ ಕಾರಣ ತಿಳಿಯಲು ಯತ್ನ ನಡೆಸಲಾಗಿದೆ. ಆರೋಪಿಗಳು ಸಿಕ್ಕಿಬಿದ್ದರೆ ಹತ್ಯೆಗೆ ಕಾರಣವೆನ್ನುವುದು ಗೊತ್ತಾಗಲಿದೆ. ಹಲವು ಆಯಾಮದಲ್ಲಿ ತನಿಖೆ ಮುಂದುವರಿಸಲಾಗಿದೆ.
ಬಿಬಿಎಂಪಿ ಛಲವಾದಿ ಪಾಳ್ಯ ವಾರ್ಡ್ ಮಾಜಿ ಕಾರ್ಪೊರೇಟರ್ ಬಿಜೆಪಿಯ ರೇಖಾ ಕದಿರೇಶ್ ಅವರನ್ನು ನಿನ್ನೆ ಬೆಳಗ್ಗೆ ಮಾರಕಾಸ್ತ್ರಗಳಿಂದ ಥಳಿಸಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.