ಬೆಂಗಳೂರು: ಚರ್ಮ ಗಂಟು ರೋಗದಿಂದ ಜಾನುವಾರು ಮೃತಪಟ್ಟರೆ ಪರಿಹಾರ ನೀಡುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಪರಿಹಾರಧನ ವಿತರಿಸಲು 2 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಚರ್ಮ ಗಂಟು ರೋಗದಿಂದ ಕರು ಮೃತಪಟ್ಟಲ್ಲಿ 5000 ರೂ., ಹಸುವಿಗೆ 20,000 ರೂ. ಹಾಗೂ ಎತ್ತು ಮೃತಪಟ್ಟಲ್ಲಿ 30 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ಚರ್ಮ ಗಂಟು ರೋಗದಿಂದ ಮರಣಿಸಿದ ಜಾನುವಾರುಗಳ ಮಾಲೀಕರಿಗೆ ಪರಿಹಾರಧನ ವಿತರಿಸಲು ಮಾರ್ಗಸೂಚಿ ಹೊರಡಿಸಲಾಗಿದೆ.
ಅನುದಾನವನ್ನು ನಿಯಮಾನುಸರ ಯಾವ ಉದ್ದೇಶಕ್ಕೆ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಬಳಸಿಕೊಂಡು ಕಡ್ಡಾಯವಾಗಿ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.