ಬೆಂಗಳೂರು : 2023-24 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳ ವಾರ್ಷಿಕ ನಿರ್ವಹಣೆಗಾಗಿ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2023-24 ನೇ ಸಾಲಿನ ಆಯವ್ಯಯದಲ್ಲಿ ಘೋಷಿತವಾದಂತೆ ಕುಡಿಯುವ ನೀರು ಮತ್ತು ಶೌಚಾಲಯ ನಿರ್ವಹಣೆಗಾಗಿ ಮತ್ತು ಶಾಲೆಯ ಇತರೇ ನಿರ್ವಹಣೆಗೆ ಖರ್ಚು ಭರಿಸಲು ಉಲ್ಲೇಖ(1) ಮತ್ತು (5) ರನ್ವಯ ಅನುದಾನ ರೂ 5187.57 ಲಕ್ಷಗಳನ್ನು ಜಿಲ್ಲಾವಾರು ಮತ್ತು ತಾಲ್ಲೂಕುವಾರು ಅನುದಾನ ಹಂಚಿಕೆ ಮಾಡಿ ರಾಜ್ಯದ ಎಲ್ಲಾ ಉಪನಿರ್ದೇಶಕರು (ಆ) ರವರುಗಳಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ.
ಮುಂದುವರೆದು ಉಲ್ಲೇಖ(6)ರ ಸರ್ಕಾರದ ಆದೇಶದನ್ವಯ ಅನುದಾನ ಬಿಡುಗಡೆಯಾಗಿರುವುದನ್ನು ಈ ಕೆಳಕಂಡಂತೆ ಉಪನಿರ್ದೇಶಕರು (ಆ) ರವರುಗಳಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಂಚಿಕೆ ಮಾಡಿ ಬಿಡುಗಡೆ ಮಾಡಲಾಗಿದೆ.